Good News, Words Of Life, And Gospel Songs With Indian Most Popular Languages By Number(from No.1 To No.12). //

ಕನ್ನಡ ಭಾಷೆ - "ಒಳ್ಳೆಯ ಸುದ್ದಿ".mp4

Informações:

Synopsis

Kannada Language - "Good News".mp4 //ಯೆಶಾಯ 52 - ‘ದೇವರ ದಾಸ’ ಕುರಿತ ನಾಲ್ಕನೆಯ ಗೀತೆ13ನನ್ನ ದಾಸನಿದೋ, ಕೃತಾರ್ಥ. ಆಗುವವನಾತ ಮಹಿಮಾನ್ವಿತ. ಏರುವನು ಉನ್ನತ ಪದವಿಗಾತ.14ಆತನ ಮುಖ ನರಮಾನವರ ಮುಖಕ್ಕಿಂತ. ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.15ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು. ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು. ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.==============ಯೆಶಾಯ 531ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?2ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ. ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ,ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.3ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು !ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.4ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು. ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು. ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು. ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!5ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ. ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ.  ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ.